
ಎಸ್& zwnj ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ದೇಶಾದ್ಯಂತ ಸುಮಾರು 15 ಕೋಟಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.
ಬಿಹಾರದಲ್ಲಿ 64 ಲಕ್ಷ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಅವರು ತಿಳಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಮತ್ತು ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.