
ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ಇನ್ನೂ ಒಂದು ಅಥವಾ ಎರಡು ಗುರಿಗಳ ಮೇಲೆ ದಾಳಿ ನಡೆಸಲು ಕೇವಲ 10 ನಿಮಿಷ ಸಾಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಅಮೆರಿಕದ ಮಧ್ಯಂತರ ಚುನಾವಣೆಯ ಬಳಿಕ ಇರಾನ್ ವಿರುದ್ಧ ಮತ್ತೊಂದು ಸೀಮಿತ ಸೇನಾ ಕಾರ್ಯಾಚರಣೆ ನಡೆಸುವ ಸಾಧ್ಯತೆಯ ಬಗ್ಗೆ ಗಲ್ಫ್ ರಾಷ್ಟ್ರಗಳಿಗೆ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ.
ಮತ್ತೊಂದೆಡೆ ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಅಮೆರಿಕ ಮತ್ತು ಇಸ್ರೇಲ್ ಬೆದರಿಕೆಗೆ ತಕ್ಷಣ ಹಾಗೂ ಭೌಗೋಳಿಕ ಮಿತಿಯಿಲ್ಲದೆ ಪ್ರತಿಕ್ರಿಯಿಸುವಂತೆ ಸೇನಾ ಕಮಾಂಡರ್‌ಗಳಿಗೆ ಸೂಚಿಸಿದ್ದಾರೆ.