
ರಾಜ್ಯದ 36 ರೈಲು ನಿಲ್ದಾಣಗಳು ಮತ್ತು 112 ಆಹಾರ ಸಂಸ್ಥೆಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ದಾಳಿ ವೇಳೆ ಅವಧಿ ಮೀರಿದ ಮೊಸರು, ಹಾಲು ಮತ್ತು ಆಹಾರ ಪದಾರ್ಥಗಳಲ್ಲಿ ಅನುಮತಿಯಿಲ್ಲದ ಕೃತಕ ಬಣ್ಣಗಳ ಬಳಕೆ ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿ ಅನೈರ್ಮಲ್ಯ ಮತ್ತು ಪ್ಲಾಸ್ಟಿಕ್ ಬಳಕೆ ಕಂಡುಬಂದಿದ್ದು, ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ.