
ಬಹುಕೋಟಿ ಮೊತ್ತದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕರ್ನಾಟಕ ಮತ್ತು ಗುಜರಾತ್‌ನ ಅಹಮದಾಬಾದ್‌ನ ಒಟ್ಟು 21 ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಸದಸ್ಯೆ ಶಾಂತ ಹೊಸಮನಿ ಅವರ ನಿವಾಸಗಳ ಮೇಲೆ ದಾಳಿ ನಡೆದಿದ್ದು, ಮಧ್ಯವರ್ತಿಗಳು ಒಂದು ಸರ್ಕಾರಿ ಹುದ್ದೆಗೆ 70 ರಿಂದ 80 ಲಕ್ಷ ರೂಪಾಯಿಗಳವರೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ.
ದಾಳಿಯ ವೇಳೆ ಇ.ಡಿ ಅಧಿಕಾರಿಗಳು ನಡೆಸಿದ ವಿಚಾರಣೆಯಲ್ಲಿ ಆರು ಅಭ್ಯರ್ಥಿಗಳು ತಪ್ಪೊಪ್ಪಿಕೊಂಡಿದ್ದು, ಸದ್ಯ ತಲೆಮರೆಸಿಕೊಂಡಿರುವ ಶಾಂತ ಹೊಸಮನಿ ಅವರ ಪತ್ತೆಗಾಗಿ ತನಿಖಾಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.