
ಬೆಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳ 16 ಸಿಹಿ ತಿಂಡಿ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ.
ತಪಾಸಣೆ ವೇಳೆ ಅವಧಿ ಮೀರಿದ 5 ಲೀಟರ್ ನಂದಿನಿ ಮೊಸರು, ಲೇಬಲ್ ಇಲ್ಲದ ಚಾಕೊಲೇಟ್ ಅಲಂಕಾರಿಕ ವಸ್ತುಗಳು ಹಾಗೂ ಒಟ್ಟು 5.99 ಲಕ್ಷ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಆಹಾರ ಮಾದರಿಗಳನ್ನು ಗುಣಮಟ್ಟ ಪರಿಶೀಲನೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಆಹಾರ ಸುರಕ್ಷತೆ ಕಾಯ್ದೆ 2006ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು.