
ಅನುದಾನ ಬಾರದ ಹಿನ್ನೆಲೆ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ (ಕೆಆರ್ಐಡಿಎಲ್) ಎಇಇ ಪರ್ವೇಜ್ ಧಾರವಾಡ (34) ಅವರ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಸೆಪ್ಟೆಂಬರ್ 13ರಂದು ಕಚೇರಿ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಅಧಿಕಾರಿ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದು, 14 ದಿನ ಕಳೆದರೂ ಸುಳಿವು ಸಿಕ್ಕಿಲ್ಲ.
ಗದಗ ಎಸ್ಪಿ ಮಿಥುನ್ ಸೂಚನೆಯಂತೆ ಡಿವೈಎಸ್ಪಿ ನೇತೃತ್ವದಲ್ಲಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆಂಧ್ರಪ್ರದೇಶದ ವಿಜಯವಾಡ ಹಾಗೂ ಹೈದರಾಬಾದ್ನಲ್ಲಿಯೂ ಹುಡುಕಾಟ ಮುಂದುವರಿದಿದೆ.