
ವಿಶಾಖಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ಹೋಮ್ವರ್ಕ್ ಪೂರ್ಣಗೊಳಿಸಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿ 6 ವರ್ಷದ ಬಾಲಕನಿಗೆ ಕಪಾಳಮೋಕ್ಷ ಮಾಡಿದ ನಂತರ ಮಗು ಮೃತಪಟ್ಟಿದೆ.
ಸಿಸಿಟಿವಿ ದೃಶ್ಯಾವಳಿಯಲ್ಲಿ ಶಿಕ್ಷಕಿ ಮಗುವನ್ನು ಗದರಿಸಿ, ಕಪಾಳಕ್ಕೆ ಬಾರಿಸುವುದು ಮತ್ತು ಮಗು ಆಕೆಯ ಮೇಲೆ ಕುಸಿದು ಬೀಳುವುದು ದಾಖಲಾಗಿದ್ದು, ಮಗು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶಾಲೆಯ ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ಇತರೆ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚುತ್ತಿದ್ದಾರೆ.