
ದಿಶಾ ಸಾಲಿಯಾನ್ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಎಫ್ಐಆರ್ನಲ್ಲಿ ತನ್ನ ಹೆಸರು ಉಲ್ಲೇಖವಾಗಿರುವುದಕ್ಕೆ ಶಿವಸೇನಾ ಮುಖಂಡ ಆದಿತ್ಯ ಠಾಕ್ರೆ ಸ್ಪಷ್ಟನೆ ನೀಡಿದ್ದಾರೆ.
ತಾನು ದಿಶಾ ಸಾಲಿಯಾನ್ ಅವರನ್ನು ಎಂದಿಗೂ ಭೇಟಿಯಾಗಿಲ್ಲ ಹಾಗೂ ತಮ್ಮ ನಡುವೆ ಯಾವುದೇ ಪರಿಚಯವಿರಲಿಲ್ಲ ಎಂದು ತಿಳಿಸಿರುವ ಅವರು, ಇದು ತನ್ನ ಚಾರಿತ್ರ್ಯವಧೆ ಮಾಡುವ ರಾಜಕೀಯ ಹುನ್ನಾರ ಎಂದು ಕಿಡಿಕಾರಿದ್ದಾರೆ.
ಬಾಂಬೆ ಹೈಕೋರ್ಟ್ ಆದೇಶದಂತೆ ಸಿಬಿಐ ಸೆಪ್ಟೆಂಬರ್ 13ರಂದು ಹೊಸದಾಗಿ ಎಫ್ಐಆರ್ ದಾಖಲಿಸಿಕೊಂಡಿದ್ದು, ಯಾವುದೇ ಹಸ್ತಕ್ಷೇಪವಿಲ್ಲದೆ ಸ್ವತಂತ್ರವಾಗಿ ತನಿಖೆ ನಡೆಯಲಿ ಎಂದು ಆದಿತ್ಯ ಠಾಕ್ರೆ ಆಗ್ರಹಿಸಿದ್ದಾರೆ.