
ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪ ಎದುರಿಸುತ್ತಿರುವ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸಂವಿಧಾನದ 317 (2)ನೇ ವಿಧಿಯಡಿ ಅಧಿಕಾರ ಚಲಾಯಿಸಿರುವ ರಾಜ್ಯಪಾಲರು, ಆಗಸ್ಟ್ 21ರಂದು ನಡೆದ ಸಚಿವ ಸಂಪುಟ ಸಭೆಯ ಶಿಫಾರಸಿನ ಆಧಾರದ ಮೇಲೆ ಈ ಕಠಿಣ ಕ್ರಮ ಕೈಗೊಂಡಿದ್ದಾರೆ.
ರಾಷ್ಟ್ರಪತಿಗಳು ಮುಂದಿನ ಆದೇಶ ನೀಡುವವರೆಗೆ ಈ ಅಮಾನತು ಜಾರಿಯಲ್ಲಿರುತ್ತದೆ ಮತ್ತು ಆಯೋಗದ ಹಿರಿಯ ಸದಸ್ಯರಿಗೆ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ.