
ಕಾವೇರಿ ನೀರು ನಿರ್ವಹಣಾ ಸಮಿತಿಯು ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3500 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ.
ರಾಜ್ಯದಲ್ಲಿ ಮಳೆ ಕೊರತೆಯಿಂದ ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದ್ದು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸರ್ಕಾರದ ಈ ನಿರ್ಧಾರಕ್ಕೆ ಮಂಡ್ಯದಲ್ಲಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನೀರು ಬಿಟ್ಟರೆ ಬೆಂಗಳೂರಿಗೆ ಹರಿಯುವ ಪೈಪ್ಲೈನ್ ಒಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.