
ಆರ್ಸಿಬಿ ನಾಯಕ ರಜತ್ ಪಾಟಿದಾರ್ ತಮ್ಮ ಸಾರ್ವಕಾಲಿಕ ಐಪಿಎಲ್ ಪ್ಲೇಯಿಂಗ್ 11 ತಂಡವನ್ನು ಪ್ರಕಟಿಸಿದ್ದು, ಇದರಲ್ಲಿ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್ ಸೇರಿದಂತೆ ಐವರು ಆರ್ಸಿಬಿ ಆಟಗಾರರಿಗೆ ಸ್ಥಾನ ನೀಡಿದ್ದಾರೆ.
ಈ ತಂಡದಲ್ಲಿ ಎಂಎಸ್ ಧೋನಿ, ಸೂರ್ಯಕುಮಾರ್ ಯಾದವ್, ಸುರೇಶ್ ರೈನಾ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಡೇಲ್ ಸ್ಟೇಯ್ನ್, ಯುಜ್ವೇಂದ್ರ ಚಾಹಲ್ ಮತ್ತು ಸುನಿಲ್ ನರೈನ್ ಸ್ಥಾನ ಪಡೆದಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಕ್ರಿಸ್ ಗೇಲ್ ಮತ್ತು ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದು, ಹಾರ್ದಿಕ್ ಪಾಂಡ್ಯ ವೇಗದ ಬೌಲಿಂಗ್ ಆಲ್ರೌಂಡರ್ ಆಗಿ ತಂಡದಲ್ಲಿ ಆಯ್ಕೆಯಾಗಿದ್ದಾರೆ.