
ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದ ನಗರ್‌ಪಾರ್ಕರ್ ಪ್ರದೇಶದ ರಥಿ ಗ್ರಾಮದಲ್ಲಿರುವ ಮಾತಾ ಜೋಗ್‌ಮಾಯಾ ದೇವಾಲಯವನ್ನು ಧ್ವಂಸಗೊಳಿಸಿದ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ದೇಗುಲದ ಉಸ್ತುವಾರಿ ನೋಡಿಕೊಳ್ಳುತ್ತಿದ್ದವರು ಮಂಗಳವಾರ ಬೆಳಿಗ್ಗೆ ದೇಗುಲದಲ್ಲಿದ್ದ ಮೂರ್ತಿಗಳು ಮುರಿದು ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ ಶಿವ ಕಾಚಿ ತಿಳಿಸಿದ್ದಾರೆ.
ಈ ಕೃತ್ಯದಲ್ಲಿ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.