
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ 'ಬಿ' ರಿಪೋರ್ಟ್ ಅನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ತನಿಖೆಯಲ್ಲಿನ ಲೋಪದೋಷಗಳು ಮತ್ತು ಕಾನೂನುಬಾಹಿರ ಡಿನೋಟಿಫಿಕೇಶನ್ ಅಂಶಗಳನ್ನು ಪರಿಗಣಿಸಿಲ್ಲ ಎಂದು ಎಎಸ್‌ಜಿ ಅರವಿಂದ್ ಕಾಮತ್ ವಾದ ಮಂಡಿಸಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 2ರ ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ.
ಈ ಹಿಂದೆ 2025ರ ಫೆಬ್ರವರಿ 12ರಂದು ಲೋಕಾಯುಕ್ತರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಅಂಗೀಕರಿಸಿತ್ತು.