
ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ ಮತ್ತು ಹೊಸ ಸದಸ್ಯರ ಸೇರ್ಪಡೆಗಾಗಿ ಸರ್ಕಾರ ಮತ್ತೆ ಅವಕಾಶ ಕಲ್ಪಿಸಿದೆ.
ಅರ್ಜಿ ಸಲ್ಲಿಸಲು ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಪ್ರಸ್ತುತ ರೇಷನ್ ಕಾರ್ಡ್ ಮತ್ತು ವಿಳಾಸದ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
ಆಸಕ್ತರು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಅಥವಾ ಸೈಬರ್ ಸೆಂಟರ್‌ಗಳ ಮೂಲಕ ಅಥವಾ ahara.kar.nic.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.