
ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ಮಾಣ ಹಾಗೂ ನವೀಕರಣ ಕಾಮಗಾರಿಗಳು ವಿಳಂಬವಾಗುತ್ತಿರುವುದಕ್ಕೆ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅನುದಾನ ಬಿಡುಗಡೆಯಾಗಿದ್ದರೂ ಕಾಮಗಾರಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಹಾಗೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.
ಹಾಸ್ಟೆಲ್ ನವೀಕರಣ ಕಾಮಗಾರಿಗಳನ್ನು ಕಡ್ಡಾಯವಾಗಿ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ಗಡುವು ವಿಧಿಸಿದ್ದಾರೆ.