
ಚಂದ್ರದರ್ಶನದ ವ್ಯತ್ಯಾಸದಿಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 25ರಂದು ಈದ್ ಮಿಲಾದ್ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಈ ಹಿಂದೆ ನಿಗದಿಪಡಿಸಿದಂತೆ ಆಗಸ್ಟ್ 26ರಂದು ಸಾರ್ವತ್ರಿಕ ರಜೆ ಮುಂದುವರಿಯಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಸಚಿವ ಯು.ಟಿ. ಖಾದರ್ ಅವರ ಮನವಿಯನ್ನು ಪರಿಗಣಿಸಿ ಸರ್ಕಾರ ಈ ಮಹತ್ವದ ಬದಲಾವಣೆ ಮಾಡಿದೆ.