
ಲಕ್ನೋದಿಂದ ದಮ್ಮಾಮ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ಟಿಶ್ಯೂ ಪೇಪರ್ ಮೇಲೆ ಬಾಂಬ್ ಎಂದು ಬರೆದಿದ್ದನ್ನು ಸಿಬ್ಬಂದಿ ಗಮನಿಸಿದ ಹಿನ್ನೆಲೆಯಲ್ಲಿ ಅಹಮದಾಬಾದ್ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ವಿಮಾನದಲ್ಲಿದ್ದ 107 ಪ್ರಯಾಣಿಕರು ಮತ್ತು 6 ಸಿಬ್ಬಂದಿ ಸೇರಿದಂತೆ ಒಟ್ಟು 113 ಮಂದಿಯನ್ನು ಸುರಕ್ಷಿತವಾಗಿ ಕೆಳಗಿಳಿಸಿ, ಸಿಐಎಸ್ಎಫ್ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ ನಡೆಸಲಾಗಿದೆ.
ತಪಾಸಣೆಯ ನಂತರ ಯಾವುದೇ ಶಂಕಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದು, ಪ್ರಯಾಣಿಕರ ಕೈಬರಹದ ಮಾದರಿಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.