ಕೆಪಿಎಸ್ಸಿ ನಡೆಸಿದ ನೇಮಕಾತಿ ಪ್ರಕರಣಗಳಲ್ಲಿ ಹೈಕೋರ್ಟ್ನ ಪೂರ್ವಾನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬಾರದೆಂದು ಸಿಐಡಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಯಶಸ್ವಿ ಅಭ್ಯರ್ಥಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದೆಂದು ಆದೇಶಿಸಿ ವಿಚಾರಣೆಯನ್ನು ಇದೇ 20ಕ್ಕೆ ಮುಂದೂಡಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಆರ್.ಕಾಂತಕುಮಾರ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಾಲಯ ಈ ನಿರ್ದೇಶನ ನೀಡಿದೆ.