
ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ ಈರುಳ್ಳಿ ಇಳುವರಿ ಕುಸಿದಿದ್ದು, ಮಾರುಕಟ್ಟೆಯಲ್ಲಿ ಪೂರೈಕೆ ಕಡಿಮೆಯಾದ ಪರಿಣಾಮ ಬೆಲೆ ದಿಢೀರ್ ಏರಿಕೆ ಕಂಡಿದೆ.
ಪ್ರಸ್ತುತ ಕೆ.ಜಿ. ಈರುಳ್ಳಿ ಬೆಲೆ 60ರಿಂದ 75 ರೂಪಾಯಿಗಳಷ್ಟಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಕೆಲವೇ ದಿನಗಳಲ್ಲಿ ದರ 100 ರೂಪಾಯಿ ಗಡಿ ದಾಟುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಸೂಕ್ತ ಕೋಲ್ಡ್ ಸ್ಟೋರೇಜ್ಗಳ ಕೊರತೆಯು ಈರುಳ್ಳಿ ಸಂಗ್ರಹಣೆ ಮತ್ತು ಬೆಲೆ ಸ್ಥಿರತೆಯನ್ನು ಕಾಪಾಡುವಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ತಜ್ಞರು ತಿಳಿಸಿದ್ದಾರೆ.