
ಮೈಸೂರು ದಸರಾ ಮಹೋತ್ಸವದಲ್ಲಿ ವಿಶೇಷವಾಗಿ ಭಾಗವಹಿಸಲು ಮುಖ್ಯಮಂತ್ರಿಗಳು ಕನ್ನಡ ಚಿತ್ರರಂಗಕ್ಕೆ ಆಹ್ವಾನ ನೀಡಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ.
ಚಿತ್ರರಂಗದವರು ದಸರಾದಲ್ಲಿ ಪಾಲ್ಗೊಳ್ಳಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಇಷ್ಟು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಂತಹ ಆಹ್ವಾನ ಬಂದಿದೆ ಎಂದು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ತಿಳಿಸಿದ್ದಾರೆ.
ದಸರಾ ಪ್ರಯುಕ್ತ ರಾಜ್ಯದಲ್ಲಿ ಎರಡು ದಿನಗಳ ಕಾಲ ಚಿತ್ರೀಕರಣಕ್ಕೆ ಬಿಡುವು ನೀಡಲಾಗುವುದು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಘೋಷಿಸಿದ್ದಾರೆ.