
ಕಾಂಗ್ರೆಸ್ ನಾಯಕರು ಕಳೆದ 20 ವರ್ಷಗಳಿಂದ ನಕಲಿ ಮತಗಳನ್ನು ಹಾಕಿಸಿಕೊಂಡು ಆಯ್ಕೆಯಾಗುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಸರಳವಾಗಿ ನಡೆಯಬೇಕಿದ್ದರೂ, ಫೇಕ್ ಮತಗಳನ್ನು ರಕ್ಷಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುವ ನಾಟಕವಾಡಿದ್ದಾರೆ ಎಂದಿದ್ದಾರೆ.
ರಾಜ್ಯ ಸರ್ಕಾರಕ್ಕೆ ಇದರ ವಿರುದ್ಧ ನೇರವಾಗಿ ಕೇಸ್ ಹಾಕುವ ಅಧಿಕಾರವಿಲ್ಲವೆಂದ ಅವರು, ಕಾನೂನಿನ ಪ್ರಕಾರ ಅರ್ಹರ ಮತಗಳು ಮಾತ್ರ ರಕ್ಷಿಸಲ್ಪಡಬೇಕು ಮತ್ತು ಅನರ್ಹರ ಮತಗಳನ್ನು ತೆಗೆದುಹಾಕಬೇಕು ಎಂದು ತಿಳಿಸಿದ್ದಾರೆ.