
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ 54.8 ಗ್ರಾಂ ತೂಕದ 14 ಚಿನ್ನದ ನಾಣ್ಯಗಳು ಸಿಕ್ಕಿದ್ದು, ಅವುಗಳ ಮೌಲ್ಯ ಸುಮಾರು 8.27 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ನಾಣ್ಯಗಳ ಮೇಲೆ ಆನೆಯ ಚಿತ್ರವಿದ್ದು, ಇವು ಕ್ರಿ.ಶ. 10ರಿಂದ 15ನೇ ಶತಮಾನದ ಗಂಗರ ಕಾಲಕ್ಕೆ ಸೇರಿರಬಹುದು ಎಂದು ಶಂಕಿಸಲಾಗಿದ್ದು, ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಅವರಿಗೆ ನಾಣ್ಯಗಳನ್ನು ಹಸ್ತಾಂತರಿಸಲಾಗಿದೆ.
ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಸಿಕ್ಕರೂ ಪ್ರಾಮಾಣಿಕತೆ ಮೆರೆದ ಕಾರ್ಮಿಕರನ್ನು ತಾಲೂಕು ಆಡಳಿತ ಶ್ಲಾಘಿಸಿದ್ದು, ನಾಣ್ಯಗಳನ್ನು ಸರ್ಕಾರಿ ಖಜಾನೆಗೆ ಒಪ್ಪಿಸಲಾಗಿದೆ.