
ನೈಸ್ ರಸ್ತೆ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರವಾಗಿ ಪ್ರತಿ ಎಕರೆಗೆ ಗರಿಷ್ಠ 15 ನಿವೇಶನಗಳನ್ನು ನೀಡಲು ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಡಿಸಿಎಂ ಡಾ. ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದು ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು.
ಕಳೆದ 25 ವರ್ಷಗಳಿಂದ ಪರಿಹಾರ ನೀಡದ ಕ್ರಮವನ್ನು ಹೈಕೋರ್ಟ್ ಅಮಾನವೀಯ ಎಂದು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.