
ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಚಿಕ್ಕಮಗಳೂರು ಪೊಲೀಸರು ನಡೆಸಿದ ತಪಾಸಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಜಹಾಂಗೀರ್, ಫೈಸುದ್ದಿನ್, ನುಮನ್ ಬಶೀರ್, ಮಹಮದ್ ಹುಮೈನ್ ಹಾಗೂ ಮಹಮದ್ ಹಸೀಬುಲ್ ಎಂದು ಗುರುತಿಸಲಾಗಿದ್ದು, ಇವರ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿಗಳು ಪತ್ತೆಯಾಗಿವೆ.
ಕಳೆದ ಎರಡು ತಿಂಗಳಿಂದ ಜಿಲ್ಲೆಯ ಕಾಫಿ ಎಸ್ಟೇಟ್ಗಳಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ ಇವರನ್ನು ಕರೆತಂದ ಏಜೆಂಟ್ ಮತ್ತು ಸಂಪರ್ಕ ಜಾಲದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.