
ಬಿಹಾರದಲ್ಲಿ ಸಕ್ಕರೆ ಬೆಲೆ ಪ್ರತಿ ಕೆಜಿಗೆ 48-50 ರೂ.ನಿಂದ 58-65 ರೂ.ಗೆ ಏರಿಕೆಯಾಗಿದ್ದು, ಸಚಿವ ಶ್ರವಣ್ ಕುಮಾರ್ ಅವರು ಮಧುಮೇಹದ ಕಾರಣ ನೀಡಿ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಸಚಿವರ ಈ ಹೇಳಿಕೆಯನ್ನು ಸಂಸದ ಪಪ್ಪು ಯಾದವ್ ತೀವ್ರವಾಗಿ ಟೀಕಿಸಿದ್ದು, ಹಬ್ಬದ ಸೀಸನ್‌ನಲ್ಲಿ ಜನಸಾಮಾನ್ಯರ ಮೇಲೆ ಹೊರೆ ಹೆಚ್ಚಾಗುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ 9 ಸಕ್ಕರೆ ಕಾರ್ಖಾನೆಗಳಿದ್ದರೂ, ಕಬ್ಬು ಬೆಳೆಗಾರರಿಗೆ ಸಿಗಬೇಕಾದ ಬೆಂಬಲ ಬೆಲೆ ಮತ್ತು ಉತ್ಪಾದನಾ ವೆಚ್ಚದ ಏರಿಕೆಯೇ ಈ ಬೆಲೆ ಹೆಚ್ಚಳಕ್ಕೆ ಮುಖ್ಯ ಕಾರಣ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.