
ಕರ್ನಾಟಕದಲ್ಲಿ ಹಿಂಗಾರು ಮಳೆ ತಾತ್ಕಾಲಿಕವಾಗಿ ದುರ್ಬಲಗೊಂಡಿದ್ದರೂ, ಅಕ್ಟೋಬರ್ 22ರಿಂದ ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಮೂರು ದಿನ ಹಾಗೂ ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗದಲ್ಲಿ ಒಂದು ದಿನ ಗರಿಷ್ಠ 115 ಮಿಲಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ದಿನವಿಡೀ ಬಿಸಿಲು ಕಂಡುಬಂದರೂ ಕೆಲವೆಡೆ ಹಗುರ ಮಳೆ ಹಾಗೂ ಮೋಡಕವಿದ ವಾತಾವರಣವಿರಲಿದ್ದು ಗರಿಷ್ಠ 30 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ.