
ಕರ್ನಾಟಕದ 10 ಜಿಲ್ಲೆಗಳಲ್ಲಿ ಮಿಂಚು ಹಾಗೂ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದ್ದು, ಅಕ್ಟೋಬರ್ 11ರ ವರೆಗೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಶಿವಮೊಗ್ಗ, ಹಾಸನ, ಮಂಡ್ಯ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಐಎಂಡಿ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರದಲ್ಲೂ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಕೆಲವೆಡೆ ಮಿಂಚು ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.