
ದಾವಣಗೆರೆಯ ಹರಿಹರ ತಾಲೂಕಿನ ಸುನೀಲ್ ಎಂಬ ಯುವಕ ಕೃತಕ ಬುದ್ಧಿಮತ್ತೆ ಬಳಸಿ ನಕಲಿ ಚಿರತೆ ಫೋಟೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದ ಕೋಳಿಫಾರ್ಮ್ ಮೇಲೆ ಚಿರತೆ ದಾಳಿ ನಡೆಸಿ ಸುಮಾರು 950ಕ್ಕೂ ಹೆಚ್ಚು ಕೋಳಿ ಮರಿಗಳು ಸಾವನ್ನಪ್ಪಿದ್ದು, ಅಂದಾಜು 1.5 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನಾರಾಯಣಪುರ ಗ್ರಾಮದಲ್ಲೂ ಚಿರತೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.