
ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನವದೆಹಲಿಗೆ ಆಗಮಿಸಿದ್ದು, ಕೇವಲ 24 ಗಂಟೆಗಳ ಕಾಲ ಅವರ ಪ್ರವಾಸ ನಿಗದಿಯಾಗಿದೆ.
ದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಹೋಟೆಲ್ ಸುತ್ತಮುತ್ತಲಿನ ವಾಯುಪ್ರದೇಶವನ್ನು ನೋ-ಫ್ಲೈ ಝೋನ್ ಎಂದು ಘೋಷಿಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕ್ಸಿ ಜಿನ್‌ಪಿಂಗ್ ನಡುವೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿದೆ.