
ಚಿಕ್ಕಮಗಳೂರು ತಾಲೂಕಿನ ಬಸಾಪುರ ಗ್ರಾಮದ ಅರಣ್ಯದಲ್ಲಿ ಪೊಲೀಸರು ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದಾಗ, ಬಂಧನದ ಭೀತಿಯಿಂದ ಓಡಿದ ರಮೇಶ್ (35) ಬಂಡೆಗೆ ಬಿದ್ದು ಮೃತಪಟ್ಟಿದ್ದಾರೆ.
ದಾಳಿ ವೇಳೆ ಒಟ್ಟು 9 ಮಂದಿ ಜೂಜಾಟದಲ್ಲಿ ತೊಡಗಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಆದರೆ ರಮೇಶ್ ತಪ್ಪಿಸಿಕೊಳ್ಳಲು ಯತ್ನಿಸುವಾಗ ಕಾಲುಜಾರಿ ಬಿದ್ದು ತಲೆಗೆ ಪೆಟ್ಟು ಬಿದ್ದಿದೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.