ಗಣಿಗಳು ಮತ್ತು ಖನಿಜಗಳ ಮೇಲೆ ತೆರಿಗೆ ವಿಧಿಸುವ ರಾಜ್ಯಗಳ ಅಧಿಕಾರವನ್ನು ಕಸಿಯುವ ‘ಗಣಿ ಮತ್ತು ಖನಿಜಗಳು (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ– 2026’ ಅನ್ನು ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿವೆ.
ಈ ಮಸೂದೆಗೆ ಲೋಕಸಭೆಯಲ್ಲಿ ಬುಧವಾರ ಮತ್ತು ರಾಜ್ಯಸಭೆಯಲ್ಲಿ ಗುರುವಾರ ಅಂಗೀಕಾರ ದೊರೆತಿದ್ದು, ಕಲ್ಲಿದ್ದಲು, ಕಬ್ಬಿಣದ ಅದಿರು ಸೇರಿದಂತೆ ಪ್ರಮುಖ ಖನಿಜಗಳು ಕೇಂದ್ರದ ವ್ಯಾಪ್ತಿಗೆ ಹಾಗೂ ಉಳಿದ 46 ಸಣ್ಣ ಖನಿಜಗಳು ರಾಜ್ಯಗಳ ವ್ಯಾಪ್ತಿಗೆ ಬರಲಿವೆ.
ದೇಶದಾದ್ಯಂತ ಖನಿಜಗಳಿಗೆ ಒಂದೇ ರೀತಿಯ ದರ ನಿಗದಿ ಮಾಡಲು ಈ ಮಸೂದೆ ತರಲಾಗಿದೆ ಎಂದು ಗಣಿ ಸಚಿವ ಜಿ. ಕೃಷ್ಣನ್ ರೆಡ್ಡಿ ಹೇಳಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಮಸೂದೆ ವಿರುದ್ಧ ರಾಜ್ಯಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು ಖಚಿತ ಎಂದಿದ್ದಾರೆ.