Indian Politics
ಖನಿಜಗಳ ಮೇಲೆ ತೆರಿಗೆ ವಿಧಿಸುವ ರಾಜ್ಯಗಳ ಅಧಿಕಾರ ಕಸಿಯುವ ಮಸೂದೆಗೆ ಸಂಸತ್ತಿನ ಅಂಗೀಕಾರ

ಖನಿಜಗಳ ಮೇಲೆ ತೆರಿಗೆ ವಿಧಿಸುವ ರಾಜ್ಯಗಳ ಅಧಿಕಾರ ಕಸಿಯುವ ಮಸೂದೆಗೆ ಸಂಸತ್ತಿನ ಅಂಗೀಕಾರ

prajavani2h
THE BRIEF
1

ಗಣಿಗಳು ಮತ್ತು ಖನಿಜಗಳ ಮೇಲೆ ತೆರಿಗೆ ವಿಧಿಸುವ ರಾಜ್ಯಗಳ ಅಧಿಕಾರವನ್ನು ಕಸಿಯುವ ‘ಗಣಿ ಮತ್ತು ಖನಿಜಗಳು (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ– 2026’ ಅನ್ನು ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿವೆ.

2

ಈ ಮಸೂದೆಗೆ ಲೋಕಸಭೆಯಲ್ಲಿ ಬುಧವಾರ ಮತ್ತು ರಾಜ್ಯಸಭೆಯಲ್ಲಿ ಗುರುವಾರ ಅಂಗೀಕಾರ ದೊರೆತಿದ್ದು, ಕಲ್ಲಿದ್ದಲು, ಕಬ್ಬಿಣದ ಅದಿರು ಸೇರಿದಂತೆ ಪ್ರಮುಖ ಖನಿಜಗಳು ಕೇಂದ್ರದ ವ್ಯಾಪ್ತಿಗೆ ಹಾಗೂ ಉಳಿದ 46 ಸಣ್ಣ ಖನಿಜಗಳು ರಾಜ್ಯಗಳ ವ್ಯಾಪ್ತಿಗೆ ಬರಲಿವೆ.

3

ದೇಶದಾದ್ಯಂತ ಖನಿಜಗಳಿಗೆ ಒಂದೇ ರೀತಿಯ ದರ ನಿಗದಿ ಮಾಡಲು ಈ ಮಸೂದೆ ತರಲಾಗಿದೆ ಎಂದು ಗಣಿ ಸಚಿವ ಜಿ. ಕೃಷ್ಣನ್‌ ರೆಡ್ಡಿ ಹೇಳಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಮಸೂದೆ ವಿರುದ್ಧ ರಾಜ್ಯಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು ಖಚಿತ ಎಂದಿದ್ದಾರೆ.