
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಖೇವಾನ್ ಚಾದರ್ ಪ್ರದೇಶದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಐವರು ಭಯೋತ್ಪಾದಕರನ್ನು ಬುಧವಾರ ಬಂಧಿಸಿದ್ದಾರೆ.
ಬಂಧಿತರಿಂದ ಎರಡು ಪಿಸ್ತೂಲು, ಮೂರು ಗ್ರೆನೇಡ್ಗಳು, ಮದ್ದುಗುಂಡುಗಳು ಹಾಗೂ ಮ್ಯಾಗಜಿನ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಕುಪ್ವಾಡ ಜಿಲ್ಲೆಯ ಹಂದ್ವಾರದ ನಗದಾ ನಾರ್ ಅರಣ್ಯ ಪ್ರದೇಶದಲ್ಲಿ ಮತ್ತೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಉಗ್ರರ ಅಡಗುತಾಣವನ್ನು ಭೇದಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.