
ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟವು ಎಲ್ಲಾ ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಆಡಳಿತರೂಢ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ.
ಬಿಜೆಪಿಯು ಈಶಾನ್ಯ ಶಿಕ್ಷಕರ, ಆಗ್ನೇಯ ಪದವೀಧರರ ಹಾಗೂ ಪಶ್ಚಿಮ ಪದವೀಧರರ ಕ್ಷೇತ್ರಗಳನ್ನು ಉಳಿಸಿಕೊಂಡಿದ್ದರೆ, ಜೆಡಿಎಸ್ ದಶಕದ ನಂತರ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ವಶಪಡಿಸಿಕೊಂಡಿದೆ.
ಅಕ್ಟೋಬರ್ 23ರಂದು ನಡೆದಿದ್ದ ಈ ಚುನಾವಣೆಯ ಮತ ಎಣಿಕೆ ಅಕ್ಟೋಬರ್ 27 ಮತ್ತು 28ರಂದು ನಡೆದು, ಎರಡು ಲಕ್ಷಕ್ಕೂ ಹೆಚ್ಚು ಮತದಾರರು ಹಕ್ಕು ಚಲಾಯಿಸಿದ್ದರು.