
ಜೀವಂತವಾಗಿರುವ ಎಂಟು ಮತದಾರರು ಮೃತಪಟ್ಟಿದ್ದಾರೆ ಎಂದು ಬಿಂಬಿಸಿ ನಕಲಿ ಮರಣ ಪ್ರಮಾಣಪತ್ರ ಸೃಷ್ಟಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಯತ್ನಿಸಲಾಗಿದೆ ಎಂದು ಅಬ್ದುಲ್ ರಝಾಕ್ ಮೌಲಾಸಾಬ್ ದೂರು ದಾಖಲಿಸಿದ್ದಾರೆ.
ಕಳೆದ ಸೆಪ್ಟೆಂಬರ್ 3ರಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ಬೆಂಬಲಿಗರು ವಿಜಯಪುರ ನಗರ ಪಾಲಿಕೆ ಆಯುಕ್ತರಿಗೆ ಶಾಸಕರ ಲೆಟರ್ ಹೆಡ್ನಲ್ಲೇ ಈ ಮನವಿ ಸಲ್ಲಿಸಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ದೂರಿನ ಆಧಾರದ ಮೇಲೆ ಜಲನಗರ ಪೊಲೀಸ್ ಠಾಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.