Indian Politics
ವಿಜಯಪುರ: ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರ ಸೃಷ್ಟಿ ಆರೋಪ, ಯತ್ನಾಳ್ ಸೇರಿ ಮೂವರ ವಿರುದ್ಧ ಎಫ್‌ಐಆರ್

ವಿಜಯಪುರ: ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರ ಸೃಷ್ಟಿ ಆರೋಪ, ಯತ್ನಾಳ್ ಸೇರಿ ಮೂವರ ವಿರುದ್ಧ ಎಫ್‌ಐಆರ್

oneindia2h
THE BRIEF
1

ಜೀವಂತವಾಗಿರುವ ಎಂಟು ಮತದಾರರು ಮೃತಪಟ್ಟಿದ್ದಾರೆ ಎಂದು ಬಿಂಬಿಸಿ ನಕಲಿ ಮರಣ ಪ್ರಮಾಣಪತ್ರ ಸೃಷ್ಟಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಯತ್ನಿಸಲಾಗಿದೆ ಎಂದು ಅಬ್ದುಲ್ ರಝಾಕ್ ಮೌಲಾಸಾಬ್ ದೂರು ದಾಖಲಿಸಿದ್ದಾರೆ.

2

ಕಳೆದ ಸೆಪ್ಟೆಂಬರ್ 3ರಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ಬೆಂಬಲಿಗರು ವಿಜಯಪುರ ನಗರ ಪಾಲಿಕೆ ಆಯುಕ್ತರಿಗೆ ಶಾಸಕರ ಲೆಟರ್ ಹೆಡ್‌ನಲ್ಲೇ ಈ ಮನವಿ ಸಲ್ಲಿಸಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

3

ದೂರಿನ ಆಧಾರದ ಮೇಲೆ ಜಲನಗರ ಪೊಲೀಸ್ ಠಾಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.