
ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದಾಗ ಗೇಲ್ ಗ್ಯಾಸ್ ಪೈಪ್‌ಲೈನ್‌ಗೆ ಹಾನಿಯಾಗಿ ಅನಿಲ ಸೋರಿಕೆಯಾದ ಘಟನೆ ನಡೆದಿದೆ.
ಅನಿಲ ಸೋರಿಕೆಯಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಸೋರಿಕೆಯನ್ನು ತಡೆಗಟ್ಟಿದ್ದಾರೆ.
ಘಟನೆಯ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದ ಸುತ್ತ ಬ್ಯಾರಿಕೇಡ್ ಹಾಕಿ ಸಂಚಾರವನ್ನು ನಿರ್ಬಂಧಿಸಲಾಗಿತ್ತು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.