Indian Politics
ಮಹಿಳಾ ಪ್ರಯಾಣಿಕರ ಮೇಲೆ ಮಾರಣಾಂತಿಕ ಹಲ್ಲೆ

ಮಹಿಳಾ ಪ್ರಯಾಣಿಕರ ಮೇಲೆ ಮಾರಣಾಂತಿಕ ಹಲ್ಲೆ

tv9kannada1h
THE BRIEF
1

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಯಲೇಶ್ವರಂ ಮಂಡಲದ ಚಿನ್ನಂಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೀಟು ಬಿಡುವ ವಿಚಾರದ ಜಗಳದಿಂದಾಗಿ 30ಕ್ಕೂ ಹೆಚ್ಚು ಜನರ ಗ್ಯಾಂಗ್ ಬಸ್ ಅಡ್ಡಗಟ್ಟಿ ಮಹಿಳಾ ಪ್ರಯಾಣಿಕರ ಮೇಲೆ ರಾಡ್ ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆಸಿದೆ.

2

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಕಾಕಿನಾಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

3

ಬಸ್ ಚಾಲಕ ಹಾಗೂ ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಯಲೇಶ್ವರಂ ಪೊಲೀಸರು ಕೊಲೆಯತ್ನ ಹಾಗೂ ಗಲಭೆ ಸೃಷ್ಟಿಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.