
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಐವರು ಆರೋಪಿಗಳು ವಾರ್ಡರ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸೆಪ್ಟೆಂಬರ್ 2ರಂದು ನಡೆದಿದೆ.
ಮೊಹಮ್ಮದ್ ಮುಜಾಮಿಲ್, ಅಬ್ದುಲ್ ಶಫ್ಘಾನ್, ಮೊಹಮ್ಮದ್ ರಿಜ್ವಾನ್, ನಯಾಜ್ ಮತ್ತು ಕಲಂದರ್ ಶಫಿ ಎಂಬ ಆರೋಪಿಗಳು ವಾರ್ಡರ್ ಅವರನ್ನು ಬ್ಯಾರಕ್ ಕೊಠಡಿಗೆ ಎಳೆದೊಯ್ದು ಕುತ್ತಿಗೆ ಹಿಸುಕಿ ಹಲ್ಲೆ ನಡೆಸಿದ್ದಾರೆ.
ಜೈಲಿನಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದ ಕಾರಣಕ್ಕೆ ಈ ಹಲ್ಲೆ ನಡೆದಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.