
ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಬೈರಮಂಗಲ ಗ್ರಾಮದಲ್ಲಿ ಐದು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೈತರನ್ನು ಚನ್ನಪಟ್ಟಣದ ಪೊಲೀಸ್ ಭವನಕ್ಕೆ ಸ್ಥಳಾಂತರಿಸಲಾಗಿದ್ದು, ಅಲ್ಲಿಯೂ ಅವರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ಯೋಜನೆ ಕೈಬಿಡದಿದ್ದರೆ ದಯಾಮರಣ ನೀಡಿ ಎಂದು ರೈತರು ಕೈಯಲ್ಲಿ ಅರ್ಜಿ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.