
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2029ರ ಲೋಕಸಭಾ ಚುನಾವಣೆಗೆ ಮುನ್ನ ಎನ್ಡಿಎ ಆಡಳಿತವಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು ಎಂದು ಘೋಷಿಸಿದ ನಂತರ ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿದೆ.
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಸೆಪ್ಟೆಂಬರ್ 18ರಂದು ಪಾಟ್ನಾದಲ್ಲಿ ಪಕ್ಷದ ಎಲ್ಲಾ ಸಂಸದರು, ಶಾಸಕರು ಹಾಗೂ ಎಂಎಲ್ಸಿಗಳ ತುರ್ತು ಸಭೆ ಕರೆದಿದ್ದು, ಯುಸಿಸಿ ನಿಲುವಿನ ಕುರಿತು ಚರ್ಚಿಸಲಿದ್ದಾರೆ.
ಪಕ್ಷದ ಕೆಲವು ಮುಖಂಡರು ಯುಸಿಸಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕರಡು ಮಸೂದೆ ಪರಿಶೀಲಿಸಿದ ನಂತರವೇ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಜೆಡಿಯು ಹಿರಿಯ ನಾಯಕ ವಿಜಯ್ ಕುಮಾರ್ ಚೌಧರಿ ತಿಳಿಸಿದ್ದಾರೆ.