
ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕಲಬುರಗಿ ಜಿಲ್ಲೆಯನ್ನು ಕೈಬಿಟ್ಟ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಸೆಪ್ಟೆಂಬರ್ 2ರಂದು ಬೃಹತ್ ಪ್ರತಿಭಟನೆ ನಡೆಸಿದೆ.
ಪ್ರತಿಭಟನಾ ಸ್ಥಳದಲ್ಲಿ ಬಿಜೆಪಿ ಮಾಜಿ ಶಾಸಕರೊಬ್ಬರು ಬೈಕ್ ಸವಾರನೊಬ್ಬನ ಹೆಲ್ಮೆಟ್ ಅನ್ನು ನೆಲಕ್ಕೆ ಒಡೆದು ಹಾಕಿ, ಸವಾರನಿಗೆ ಧಮ್ಕಿ ಹಾಕುವ ಮೂಲಕ ದರ್ಪ ತೋರಿದ್ದಾರೆ.
ರಾಜ್ಯದಲ್ಲಿ ಭೀಕರ ಬರ ಆವರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.