
ಬೆಂಗಳೂರು ಪೊಲೀಸರು ನಡೆಸಿದ 'ಆಪರೇಷನ್ ಮುಕ್ತ' ಕಾರ್ಯಾಚರಣೆಯಲ್ಲಿ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ರೈಲಿನ ಮೂಲಕ ಪಶ್ಚಿಮ ಬಂಗಾಳದ ಮಾಲ್ಡಾಗೆ ಕರೆದೊಯ್ಯಲಾಗುತ್ತಿದ್ದು, ಅಲ್ಲಿ ಬಿಎಸ್‌ಎಫ್ ಅಧಿಕಾರಿಗಳ ವಶಕ್ಕೆ ಹಸ್ತಾಂತರಿಸಿ ಬಾಂಗ್ಲಾದೇಶಕ್ಕೆ ಗಡೀಪಾರು ಮಾಡುವ ಪ್ರಕ್ರಿಯೆ ನಡೆಯುತ್ತಿದೆ.
ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಈ ಕಾರ್ಯಾಚರಣೆಯು ಮುಂದಿನ 10-15 ದಿನಗಳ ಕಾಲ ಮುಂದುವರಿಯಲಿದ್ದು, ಅಕ್ರಮವಾಗಿ ವಾಸಿಸುತ್ತಿರುವವರನ್ನು ಹಂತ ಹಂತವಾಗಿ ಹೊರಕಳುಹಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.