
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವಿಚಾರವಾಗಿ ಗೃಹ ಸಚಿವ ಅಮಿತ್ ಶಾ ಅವರ ಸಂಸತ್‌ನ ಎರಡು ಹೇಳಿಕೆಗಳ ಕತ್ತರಿಸಿದ ವಿಡಿಯೋಗಳನ್ನು ಹಂಚಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್ 5ರಂದು SIR ವಿಚಾರವನ್ನು ಸದನದಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದಿದ್ದ ಅಮಿತ್ ಶಾ, ನವೆಂಬರ್ 6ರಂದು ಚರ್ಚಿಸಲು ಸರ್ಕಾರ ಸಿದ್ಧವಿದೆ ಮತ್ತು ವಿಶೇಷ ಅಧಿವೇಶನ ಕರೆಯಲೂ ಸಿದ್ಧ ಎಂದು ಹೇಳಿಕೆ ನೀಡಿದ್ದರು.
ರಾಜಕೀಯ ನಾಟಕ ಮಾಡುವುದನ್ನು ಬಿಟ್ಟು ಸಂಸತ್‌ಗೆ ಬಂದು ದಾಖಲೆ ಹಾಗೂ ವಾಸ್ತವಾಂಶಗಳೊಂದಿಗೆ ಚರ್ಚೆ ನಡೆಸುವಂತೆ ಜೋಶಿ ಸವಾಲು ಹಾಕಿದ್ದಾರೆ.