
ಚುನಾವಣಾ ಆಯೋಗದ ಮತದಾರರ ಪಟ್ಟಿ ಅಕ್ರಮಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ ಕರೆ ನೀಡಿರುವ ಜಂತರ್ ಮಂತರ್ 2.0 ಪ್ರತಿಭಟನೆಯ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ 40,000ಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಭದ್ರತಾ ದೃಷ್ಟಿಯಿಂದ ದೆಹಲಿ ಮೆಟ್ರೋ ನಿಗಮವು ಮಧ್ಯ ದೆಹಲಿಯ 45 ಪ್ರಮುಖ ನಿಲ್ದಾಣಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದು, ಜನ್‍ಪಥ್ ಸುತ್ತಮುತ್ತ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ದೆಹಲಿ ಜಿಲ್ಲೆಯಾದ್ಯಂತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.