
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿನ 15,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್ 18ರಿಂದ ಅಧಿಕೃತವಾಗಿ ಆರಂಭವಾಗಿದೆ.
ಅಭ್ಯರ್ಥಿಗಳು ಸೆಪ್ಟೆಂಬರ್ 7ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಸೆಪ್ಟೆಂಬರ್ 10ರವರೆಗೆ ಶುಲ್ಕ ಪಾವತಿಸಬಹುದಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಆಸಕ್ತರು schooleducation.karnataka.gov.in/cacell/kn ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಯಾವುದೇ ಗೊಂದಲಗಳಿಗೆ 080-22483145 ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.