
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಅಬು ಸಲೇಂ ಸಲ್ಲಿಸಿದ್ದ ಬಿಡುಗಡೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಆತ 2030ರ ನವೆಂಬರ್‌ವರೆಗೆ ಜೈಲಿನಲ್ಲಿರಬೇಕೆಂದು ಸ್ಪಷ್ಟಪಡಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು, 2005ರಲ್ಲಿ ಭಾರತಕ್ಕೆ ಹಸ್ತಾಂತರವಾದ ದಿನದಿಂದ ಶಿಕ್ಷೆಯ ಅವಧಿಯನ್ನು ಲೆಕ್ಕ ಹಾಕಲಾಗುವುದು ಎಂದು ತಿಳಿಸಿದೆ.
ಭಾರತ ಮತ್ತು ಪೋರ್ಚುಗಲ್ ನಡುವಿನ ಹಸ್ತಾಂತರ ಒಪ್ಪಂದದ ಪ್ರಕಾರ, ಸಲೇಂಗೆ ಮರಣದಂಡನೆ ವಿಧಿಸುವಂತಿಲ್ಲ ಮತ್ತು 25 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಇಡುವಂತಿಲ್ಲ ಎಂಬ ಷರತ್ತಿಗೆ ಸರ್ಕಾರ ಬದ್ಧವಾಗಿದೆ.