
ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದ್ದು, ಮಳೆ ಅನಾಹುತಗಳನ್ನು ತಡೆಯಲು ಪೂರ್ವ ನಗರ ಪಾಲಿಕೆ ವತಿಯಿಂದ ಅಗತ್ಯ ಸಿದ್ಧತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ರಸ್ತೆ ಮತ್ತು ಚರಂಡಿಗಳಲ್ಲಿ ಸಂಗ್ರಹವಾಗಿರುವ ಹೂಳು ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯವನ್ನು ತ್ವರಿತವಾಗಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪ್ರವಾಹ ಪರಿಸ್ಥಿತಿ ಹಾಗೂ ಮರಗಳು ಉರುಳುವಂತಹ ಘಟನೆಗಳನ್ನು ನಿಭಾಯಿಸಲು ಪ್ರತಿ ವಲಯದಲ್ಲಿ 10 ರಿಂದ 15 ಕಾರ್ಮಿಕರ ತಂಡಗಳನ್ನು ಸನ್ನದ್ಧವಾಗಿಡಲು ಆಯುಕ್ತ ಡಿ.ಎಸ್. ರಮೇಶ್ ನಿರ್ದೇಶನ ನೀಡಿದ್ದಾರೆ.