
ನೆದರ್ಲ್ಯಾಂಡ್ಸ್ನ ವೆಗ್ನರ್ ಕ್ರೀಡಾಂಗಣದಲ್ಲಿ ನಡೆದ 2026ರ ಹಾಕಿ ವಿಶ್ವಕಪ್ನ ಮೂರನೇ ಲೀಗ್ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 5-3 ಗೋಲುಗಳ ಅಂತರದಿಂದ ಸೋಲಿಸಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.
ಭಾರತದ ಪರ ನಾಯಕ ಹರ್ಮನ್ಪ್ರೀತ್ ಸಿಂಗ್ 5ನೇ ಮತ್ತು 20ನೇ ನಿಮಿಷದಲ್ಲಿ ಎರಡು ಗೋಲು ಗಳಿಸಿದರೆ, ಅಭಿಷೇಕ್ 11ನೇ ಮತ್ತು 24ನೇ ನಿಮಿಷದಲ್ಲಿ ಹಾಗೂ ಹಾರ್ದಿಕ್ ಸಿಂಗ್ 34ನೇ ನಿಮಿಷದಲ್ಲಿ ಗೋಲು ಬಾರಿಸಿ ತಂಡದ ಗೆಲುವಿಗೆ ಕಾರಣರಾದರು.
ಈ ಗೆಲುವಿನೊಂದಿಗೆ ಭಾರತ ತಂಡವು ಮುಂದಿನ ಸುತ್ತಿಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡರೆ, ಭಾರತದ ವಿರುದ್ಧ ಸೋಲು ಕಂಡ ಪಾಕಿಸ್ತಾನ ತಂಡವು ವಿಶ್ವಕಪ್ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದೆ.