
ರಾಜ್ಯದ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊಸದಾಗಿ 3 ಲೇಯರ್ ಒಎಂಆರ್ ಶೀಟ್ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಿದೆ.
ಇತ್ತೀಚೆಗೆ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಇದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಈ ವ್ಯವಸ್ಥೆಯಲ್ಲಿ ಮೊದಲ ಪ್ರತಿ ಕೆಇಎಗೆ ಸಲ್ಲಿಕೆಯಾದರೆ, ಎರಡನೇ ಪ್ರತಿ ಅಭ್ಯರ್ಥಿ ಬಳಿ ಇರುತ್ತದೆ ಮತ್ತು ಮೂರನೇ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸ್ಟ್ರಾಂಗ್ ರೂಂನಲ್ಲಿ ಸಂಗ್ರಹಿಸಲಾಗುತ್ತದೆ.